Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:6 - ಪರಿಶುದ್ದ ಬೈಬಲ್‌

6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:6
8 ತಿಳಿವುಗಳ ಹೋಲಿಕೆ  

ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


ಯೆಹೋವನೇ, ‘ಈ ಮೂರ್ಖ ಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?


ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು