ಕೀರ್ತನೆಗಳು 14:2 - ಪರಿಶುದ್ದ ಬೈಬಲ್2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”