ಕೀರ್ತನೆಗಳು 140:9 - ಪರಿಶುದ್ದ ಬೈಬಲ್9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.