Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:3 - ಪರಿಶುದ್ದ ಬೈಬಲ್‌

3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಾವಲಿರಿಸು ಪ್ರಭು ನನ್ನ ಬಾಯಿಗೆ I ಪಹರೆಯಿರಲಿ ನನ್ನ ತುಟಿ ಕದಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು; ನನ್ನ ತುಟಿಗಳೆಂಬ ಕದವನ್ನು ಕಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:3
8 ತಿಳಿವುಗಳ ಹೋಲಿಕೆ  

ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.


ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.


ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.


ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು