ಕೀರ್ತನೆಗಳು 141:9 - ಪರಿಶುದ್ದ ಬೈಬಲ್9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೆಡುಕರು ಒಡ್ಡಿದ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; ಅವರಿಟ್ಟ ಬೋನಿಗೆ ನನ್ನನ್ನು ತಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)