ಕೀರ್ತನೆಗಳು 142:3 - ಪರಿಶುದ್ದ ಬೈಬಲ್3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ. ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.