ಕೀರ್ತನೆಗಳು 142:4 - ಪರಿಶುದ್ದ ಬೈಬಲ್4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |