ಕೀರ್ತನೆಗಳು 143:1 - ಪರಿಶುದ್ದ ಬೈಬಲ್1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.