ಕೀರ್ತನೆಗಳು 143:2 - ಪರಿಶುದ್ದ ಬೈಬಲ್2 ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.