ಕೀರ್ತನೆಗಳು 143:8 - ಪರಿಶುದ್ದ ಬೈಬಲ್8 ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿ |