ಕೀರ್ತನೆಗಳು 144:12 - ಪರಿಶುದ್ದ ಬೈಬಲ್12 ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಹೊರವಾಗಿ ಬೆಳೆದಿರುವ ಸಸಿಗಳಂತಿರುವರು; ಹೆಣ್ಣುಮಕ್ಕಳು ಅರಮನೆಯಲ್ಲಿರುವ ವಿಚಿತ್ರವಾಗಿ ಕೆತ್ತಿದ ಮೂಲೆಗಂಬದಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. ಅಧ್ಯಾಯವನ್ನು ನೋಡಿ |
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.