Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:15 - ಪರಿಶುದ್ದ ಬೈಬಲ್‌

15 ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು; ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:15
7 ತಿಳಿವುಗಳ ಹೋಲಿಕೆ  

ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.


ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.


ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು