ಕೀರ್ತನೆಗಳು 144:2 - ಪರಿಶುದ್ದ ಬೈಬಲ್2 ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಪ್ರೀತಿಯೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ಆಶ್ರಯವೂ ನನ್ನ ಜನವನ್ನು ನನಗೆ ಅಧೀನಮಾಡಿದವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.