ಕೀರ್ತನೆಗಳು 145:17 - ಪರಿಶುದ್ದ ಬೈಬಲ್17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”