Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:4 - ಪರಿಶುದ್ದ ಬೈಬಲ್‌

4 ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:4
11 ತಿಳಿವುಗಳ ಹೋಲಿಕೆ  

ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರ್ಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.


ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು