Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:5 - ಪರಿಶುದ್ದ ಬೈಬಲ್‌

5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನೂ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:5
16 ತಿಳಿವುಗಳ ಹೋಲಿಕೆ  

ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!


ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.


ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.


ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು.


ಯೆಹೋವನ ಹೆಸರಿನಲ್ಲಿ ಮಾತಾಡುವಂತೆ ಮಾಡಿದ ದೇವರಿಗೆ ಸ್ತೋತ್ರ!


ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ.


ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು