ಕೀರ್ತನೆಗಳು 145:6 - ಪರಿಶುದ್ದ ಬೈಬಲ್6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.