ಕೀರ್ತನೆಗಳು 145:8 - ಪರಿಶುದ್ದ ಬೈಬಲ್8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ದಯೆಯೂ ಕನಿಕರವೂ ಉಳ್ಳವನು; ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.