Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:3 - ಪರಿಶುದ್ದ ಬೈಬಲ್‌

3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:3
11 ತಿಳಿವುಗಳ ಹೋಲಿಕೆ  

ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು!


ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯಮಾಡು! ಜನರು ನಮಗೆ ಸಹಾಯಮಾಡಲಾರರು!


ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.


ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು