Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:6 - ಪರಿಶುದ್ದ ಬೈಬಲ್‌

6 ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಭೂವಿು, ಆಕಾಶ, ಸಾಗರ, ಚರಾಚರ ಇವುಗಳನ್ನು ನಿರ್ಮಿಸಿದವನೂ ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:6
26 ತಿಳಿವುಗಳ ಹೋಲಿಕೆ  

ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.


ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ.


ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.


ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.


ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ.


ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.


ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.


ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಗಸ್ತನಾಗಿರುವೆನು.


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು