ಕೀರ್ತನೆಗಳು 146:9 - ಪರಿಶುದ್ದ ಬೈಬಲ್9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.