ಕೀರ್ತನೆಗಳು 147:13 - ಪರಿಶುದ್ದ ಬೈಬಲ್13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ. ಅಧ್ಯಾಯವನ್ನು ನೋಡಿ |
ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.