ಕೀರ್ತನೆಗಳು 147:14 - ಪರಿಶುದ್ದ ಬೈಬಲ್14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.