ಕೀರ್ತನೆಗಳು 147:19 - ಪರಿಶುದ್ದ ಬೈಬಲ್19 ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ; ತನ್ನ ನಿಯಮವಿಧಿಗಳನ್ನು ಇಸ್ರಾಯೇಲ್ಯರಿಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ. ಅಧ್ಯಾಯವನ್ನು ನೋಡಿ |
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.