ಕೀರ್ತನೆಗಳು 147:2 - ಪರಿಶುದ್ದ ಬೈಬಲ್2 ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.