ಕೀರ್ತನೆಗಳು 147:3 - ಪರಿಶುದ್ದ ಬೈಬಲ್3 ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.