Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:8 - ಪರಿಶುದ್ದ ಬೈಬಲ್‌

8 ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ; ಭೂವಿುಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:8
17 ತಿಳಿವುಗಳ ಹೋಲಿಕೆ  

ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ.


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!


ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು