ಕೀರ್ತನೆಗಳು 148:14 - ಪರಿಶುದ್ದ ಬೈಬಲ್14 ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |