ಕೀರ್ತನೆಗಳು 148:4 - ಪರಿಶುದ್ದ ಬೈಬಲ್4 ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.