Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:5 - ಪರಿಶುದ್ದ ಬೈಬಲ್‌

5 ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಯೆಹೋವನ ನಾಮವನ್ನು ಸ್ತುತಿಸಲಿ; ಆತನು ಅಪ್ಪಣೆಕೊಡಲು ಅವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:5
8 ತಿಳಿವುಗಳ ಹೋಲಿಕೆ  

“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.


ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.


ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು