Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:2 - ಪರಿಶುದ್ದ ಬೈಬಲ್‌

2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ತಮ್ಮ ಸೃಷ್ಟಿಕರ್ತನಲ್ಲಿ ಹೆಚ್ಚಳಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:2
25 ತಿಳಿವುಗಳ ಹೋಲಿಕೆ  

ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”


ನಾನೇ ನಿಮ್ಮ ಪರಿಶುದ್ಧನಾದ ಯೆಹೋವನು. ನಾನು ಇಸ್ರೇಲನ್ನು ಸೃಷ್ಟಿಸಿದೆನು; ನಾನೇ ನಿಮ್ಮ ಅರಸನು.”


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು