ಕೀರ್ತನೆಗಳು 149:4 - ಪರಿಶುದ್ದ ಬೈಬಲ್4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.