ಕೀರ್ತನೆಗಳು 15:2 - ಪರಿಶುದ್ದ ಬೈಬಲ್2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ; ಅಧ್ಯಾಯವನ್ನು ನೋಡಿ |
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.