ಕೀರ್ತನೆಗಳು 15:3 - ಪರಿಶುದ್ದ ಬೈಬಲ್3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಚಾಡಿಯನ್ನು ಹೇಳದವನೂ ಮತ್ತೊಬ್ಬರಿಗೆ ಅನ್ಯಾಯಮಾಡದವನೂ ಯಾರನ್ನೂ ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ; ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.