Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 15:5 - ಪರಿಶುದ್ದ ಬೈಬಲ್‌

5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 15:5
29 ತಿಳಿವುಗಳ ಹೋಲಿಕೆ  

ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೋ ಸಮಾಧಾನದಿಂದಿರುವರು.


ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.


“ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.


ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು