Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:11 - ಪರಿಶುದ್ದ ಬೈಬಲ್‌

11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:11
28 ತಿಳಿವುಗಳ ಹೋಲಿಕೆ  

ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಪರಿಶುದ್ಧ ಹೃದಯವುಳ್ಳವರು ಧನ್ಯರು. ಅವರು ದೇವರನ್ನು ನೋಡುವರು.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಮನುಷ್ಯಕುಮಾರನು ಕುರಿಗಳನ್ನು ತನ್ನ ಬಲಗಡೆಯಲ್ಲಿಯೂ ಮತ್ತು ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.


ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.


ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!


“ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.


ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.


ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು