ಕೀರ್ತನೆಗಳು 16:4 - ಪರಿಶುದ್ದ ಬೈಬಲ್4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.