ಕೀರ್ತನೆಗಳು 16:5 - ಪರಿಶುದ್ದ ಬೈಬಲ್5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.