ಕೀರ್ತನೆಗಳು 17:1 - ಪರಿಶುದ್ದ ಬೈಬಲ್1 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.