ಕೀರ್ತನೆಗಳು 17:15 - ಪರಿಶುದ್ದ ಬೈಬಲ್15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.