ಕೀರ್ತನೆಗಳು 17:3 - ಪರಿಶುದ್ದ ಬೈಬಲ್3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.