Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:6 - ಪರಿಶುದ್ದ ಬೈಬಲ್‌

6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:6
10 ತಿಳಿವುಗಳ ಹೋಲಿಕೆ  

ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.


ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ.


ನನ್ನ ಪ್ರಾರ್ಥನೆಗಳಿಗೆ ದಯವಿಟ್ಟು ಗಮನಕೊಡು. ಕರುಣೆಗೋಸ್ಕರ ನಾನಿಡುವ ಮೊರೆಗಳನ್ನು ಆಲಿಸು.


ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರ ಕೊಡುವನು.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು