Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:9 - ಪರಿಶುದ್ದ ಬೈಬಲ್‌

9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ಕಾಯಿ; ಕಣ್ಣುಗುಡ್ಡಿನಂತೆಯೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:9
8 ತಿಳಿವುಗಳ ಹೋಲಿಕೆ  

ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.


ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.


ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು