ಕೀರ್ತನೆಗಳು 18:15 - ಪರಿಶುದ್ದ ಬೈಬಲ್15 ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.