ಕೀರ್ತನೆಗಳು 18:3 - ಪರಿಶುದ್ದ ಬೈಬಲ್3 ಯೆಹೋವನಿಗೆ ಸ್ತೋತ್ರವಾಗಲಿ! ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.