ಕೀರ್ತನೆಗಳು 18:39 - ಪರಿಶುದ್ದ ಬೈಬಲ್39 ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.