ಕೀರ್ತನೆಗಳು 18:44 - ಪರಿಶುದ್ದ ಬೈಬಲ್44 ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು. ಅಧ್ಯಾಯವನ್ನು ನೋಡಿ |
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.