ಕೀರ್ತನೆಗಳು 18:50 - ಪರಿಶುದ್ದ ಬೈಬಲ್50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.