ಕೀರ್ತನೆಗಳು 19:11 - ಪರಿಶುದ್ದ ಬೈಬಲ್11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು. ಅಧ್ಯಾಯವನ್ನು ನೋಡಿ |
ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.