ಕೀರ್ತನೆಗಳು 19:14 - ಪರಿಶುದ್ದ ಬೈಬಲ್14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.